ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 21 ರಿಂದ 27 ವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನ.28 ರಂದು ಬಿಡುಗಡೆಗೊಳಿಸಲಾಯಿತು.
ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಯವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೋಶಾಧಿಕಾರಿ ನಿರಂಜನ್ ರೈ ಮಠಂತಬೆಟ್ಟು, ಕಾರ್ಯಕ್ರಮ ಸಂಯೋಜಕ ರಾಜಮಣಿ ರೈ ಮಠಂತಬೆಟ್ಟು ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.