ಪುತ್ತೂರು: ಮಾಜಿ ಶಾಸಕರಾದ ಶಕುಂತಲಾ ಟಿ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ರವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ ರವರು ಸಾಹಿರ ಝುಬೈರ್ ರನ್ನು ರಾಜ್ಯ ಮಹಿಳಾ ಕಾಂಗ್ರೆಸ್ ನ ಕಾರ್ಯದರ್ಶಿಯನ್ನಾಗಿ ನೇಮಕಗೊಳಿಸಿ ಆದೇಶಿಸಿದ್ದಾರೆ.
ಪುತ್ತೂರು ದರ್ಬೆ ನಿವಾಸಿಯಾಗಿರುವ ಸಾಹಿರ ಝುಬೈರ್ ನೋಟರಿ ನ್ಯಾಯವಾದಿಗಳಾಗಿದ್ದು, ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಯಾಗಿ, ಜಿಲ್ಲಾ ಕಾಂಗ್ರೆಸ್ ಸದಸ್ಯರಾಗಿ ಪಕ್ಷ ಸಂಘಟಣೆಯಲ್ಲಿ ತೊಡಗಿಸಿಕೊಂಡಿದ್ದು,
ಪುತ್ತೂರು ಕಾನೂನು ಸೇವಾಪ್ರಾಧಿಕಾರದ ಸಂಪನ್ಮೂಲ ವ್ಯಕ್ತಿಯಾಗಿ, ಪುತ್ತೂರು ಸ್ವರ್ಣ ರೋಟರಿ ಸಂಸ್ಥೆಯ ಸದಸ್ಯರಾಗಿ, ಪುತ್ತೂರು ಸ್ವಾಭಿಮಾನ ವೇದಿಕೆಯ ಸದಸ್ಯರಾಗಿ, ಜಿಲ್ಲಾ ಮಕ್ಕಳ ಹಕ್ಕುಗಳ ಸಂಚಲನ ಸಮಿತಿ ಸದಸ್ಯರಾಗಿ, ಪುತ್ತೂರು ಶಿಕ್ಷಣ ಸಂಪನ್ಮೂಲ ಸಮಿತಿಯ ಸದಸ್ಯರಾಗಿ ಹಲವಾರು ಸಾಮಾಜಿಕ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡವರಾಗಿದ್ದಾರೆ.




























