ಮಂಗಳೂರು: ನಗರದಲ್ಲಿ ನಡೆದ ನಾಗಬನ ಅಪವಿತ್ರ ಪ್ರಕರಣದಲ್ಲಿ ಹಿಂದೂ ಆರೋಪಿಗಳನ್ನು ನೋಡುವಾಗ ಆಶ್ಚರ್ಯ ಆಗಬಹುದು.ಇಲ್ಲಿ ಇವರನ್ನು ಜೋಡಿಸುವ ಪ್ರಕ್ರಿಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಇದರ ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣ ಮೂರ್ತಿ ಹೇಳಿಕೆ ನೀಡಿದ್ದಾರೆ.
ನಗರದ ವಿಶ್ವ ಹಿಂದೂ ಪರಿಷದ್ ನ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ನಾಗ ಬನವನ್ನು ಅಪವಿತ್ರಗೊಳಿಸಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆರಕ್ಷಕ ಸಿಬ್ಬಂದಿಗೆ ವಿಎಚ್‌ಪಿಗೆ ಅಭಿನಂದನೆ ಸಲ್ಲಿಸುತ್ತಿದೆ. ಆದರೆ ಈ ಪ್ರಕರಣದಲ್ಲಿ ಹಿಂದೂ ಆರೋಪಿಗಳು ಇರುವುದನ್ನು ಗಮನಿಸಿದಾಗ ಇದೊಂದು ವ್ಯವಸ್ಥಿತ ಷಡ್ಯಂತ್ರದ ಫಿಕ್ಸಿಂಗ್ ಭಾಗವಾಗಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಈ ಪ್ರಕರಣದಲ್ಲಿ 4 ಹಿಂದೂಗಳನ್ನು ಆರೋಪಿಗಳನ್ನಾಗಿ ಸೇರಿಸಿದ್ದಾರೆ. ಜೊತೆಗೆ ಇದಕ್ಕೆ ಮಾದಕ ದ್ರವ್ಯದ ಲೇಪ ನೀಡಿದ್ದಾರೆ.ಮೇಲ್ನೋಟದಲ್ಲಿ ಇದನ್ನು ಗಮನಿಸಿದಾಗ ಸಮುದಾಯದಲ್ಲಿ ಕೋಮುದೃಷ್ಟಿ ಬರಬಾರದೆಂದು ಹಿಂದೂಗಳಿಗೆ ಹಣ ಒದಗಿಸಿ ಅವರನ್ನು ಬಲವಂತವಾಗಿ ಅಥವಾ ಒತ್ತಾಯಪೂರ್ವಕವಾಗಿ ದುಶ್ಕೃತ್ಯದಲ್ಲಿ ಭಾಗವಹಿಸುವಂತೆ ಮಾಡಿದ್ದಾರೆ ಎಂದು ಕಾಣುತ್ತಿದೆ ಎಂದು ಆರೋಪಿಸಿದರು.
ಪೊಲೀಸರೇ ಇದೊಂದು ಯೋಜಿತ ಸುಪಾರಿ ಕೃತ್ಯವಾಗಿದೆ ಎಂದು ಹೇಳಿಕೆ ನೀಡಿದ್ದನ್ನು ಗಮನಿಸಿದರೇ, ಪ್ರಬಲ ಹಿಂದೂ ಸಮಾಜವನ್ನು ಒಡೆಯಲು ಮುಸ್ಲಿಂ ಸಂಘಟನೆಗಳು ಇದರಲ್ಲಿ ಪಾಲ್ಗೊಂಡಿರುವುದು ಸ್ಪಷ್ಟವಾಗುತ್ತದೆ ಎಂದು ಹೇಳಿದರು.ಇದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಜೊತೆಗೆ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸುವಂತೆ ಹೇಳಿದ್ದಾರೆ.ಆದ್ದರಿಂದ ಧಾರ್ಮಿಕ ದತ್ತಿ ಇಲಾಖೆ ರಾಜ್ಯದ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಸಿಸಿ ಅಳವಡಿಸಲಿ ಎಂದರು.
ಇದರ ಜೊತೆಗೆ ಧಾರ್ಮಿಕ ಕೇಂದ್ರಕ್ಕೆ ಭದ್ರತೆ ನೀಡುವ ಬಗ್ಗೆ ಪೊಲೀಸ್ ಆಯುಕ್ತರಿಗೆ ಸಂಘಟನೆಗಳೂ ಸಹಕಾರ ನೀಡಲಿದೆ. ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವ-ದೇವತೆಗಳನ್ನು ಅಶ್ಲೀಲವಾಗಿ ಚಿತ್ರಿಸುತ್ತಿದ್ದಾರೆ. ಇದು ನಿಲ್ಲಬೇಕು. ಅಂಥವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.