ಬೆಟ್ಟಂಪಾಡಿ: ಪ್ರಜಾಪ್ರಭುತ್ವ ರಾಷ್ಟ್ರದ ಪ್ರಜೆಗಳಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಇರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಾಮೋದರ ಕಣಜಾಲು ಹೇಳಿದರು. ಅವರು ಇತ್ತೀಚಿಗೆ ಕಾಲೇಜಿನಲ್ಲಿ ಜರುಗಿದ ಸಂವಿಧಾನ ದಿನಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ವರದರಾಜ ಚಂದ್ರಗಿರಿ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ, ವಿದ್ಯಾರ್ಥಿಗಳು ಭಾರತದ ಸಂವಿಧಾನದ ಬಗ್ಗೆ ಅಧ್ಯಯನ ಮಾಡಿಕೊಂಡು ರಾಷ್ಟ್ರದ ಜವಾಬ್ದಾರಿಯುತ ಪ್ರಜೆಯಾಗಲು ಪಣತೊಡಬೇಕು ಎಂದು ಕರೆ ಕೊಟ್ಟರು ಹಾಗೂ ಸಂವಿಧಾನ ದಿನಾಚರಣೆ ಪ್ರತಿಜ್ಞೆ ಬೋಧಿಸಿದರು.
ಕಾಲೇಜು ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕರು ಮತ್ತು ಎನ್ಎಸ್ಎಸ್ ಅಧಿಕಾರಿಗಳಾಗಿರುವ ಹರಿಪ್ರಸಾದ್ ಎಸ್ ಕಾರ್ಯಕ್ರಮವನ್ನು ನಿರ್ವಹಿಸಿದರು.