ಪುತ್ತೂರು: ಪಕ್ಕದ ಮನೆಯ ನೀರಿನ ಟ್ಯಾಂಕ್ ಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸವಣೂರಿನಲ್ಲಿ ನಡೆದಿದೆ.
ಮೃತರನ್ನು ಸವಣೂರು ಗ್ರಾಮದ ಮಾಂತೂರು ಒಡ್ಸಾಗ್ ನಿವಾಸಿ ರಾಮಯ್ಯ ಪೂಜಾರಿ (48) ಎನ್ನಲಾಗಿದೆ.
ರಾಮಯ್ಯ ಪೂಜಾರಿ ಯವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದಾಗ ನಿನ್ನೆ ಪಕ್ಕದ ಮನೆಯ ಟ್ಯಾಂಕ್ ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ತನಿಖೆ ನಂತರವಷ್ಟೇ ತಿಳಿಯಬೇಕಿದೆ..
ಮೃತದೇಹವನ್ನು ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮೃತರು ಹೆಂಡತಿ, ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.