ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಕೊಂಬೆಟ್ಟು ಕಾಲೇಜಿನ ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ.. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ವರದಿಯಾಗಿದೆ.
ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿದು ಬಂದಿದೆ.
ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ.
ಹಿಂದೂ ಯುವಕನೊಬ್ಬ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಿ, ಬೇರೆ ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಹಿಂದೂ ವಿದ್ಯಾರ್ಥಿಯನ್ನು ಗದರಿಸಿದ್ದಾರೆ ಎನ್ನಲಾಗಿದೆ.
ಬೇರೆ ಕಾಲೇಜಿನ ಕೆಲ ಯುವಕರು ನಮಗೆ ‘ಅವಾಚ್ಯ ಶಬ್ಧಗಳಿಂದ ಬೈದು, ಇನ್ನೂ ಮುಂದೆ ಗುಂಪು ಕಟ್ಟಿಕೊಂಡು ಒಟ್ಟಿಗೆ ಇದ್ದರೇ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದು ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಿದ್ದಾರೆ ಎಂದು ತಿಳಿದು ಬಂದಿದೆ.