ಮಂಗಳೂರು : ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಲಂಕಾರುಗುಡ್ಡೆ ಬಳಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿಯನ್ನು ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್ ಎಂದು ಎನ್ನಲಾಗಿದೆ.
ರಾಶಿಕ್ ಉಚ್ಚಿಲದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ ಆರೋಪವನ್ನೂ ಹೊಂದಿದ್ದು, ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು ಸಿಸಿಬಿ ಅಧಿಕಾರಿಗಳು ರಾಶಿಕ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಡಿ.1 ರ ತಲಪಾಡಿಯ ಆಲಂಕಾರುಗುಡ್ಡೆ ಪ್ರದೇಶದಲ್ಲಿ ಶಾಲೆಗೆ ತೆರಳುತ್ತಿದ್ದಾಗ ಸ್ಕೂಟರ್ ನಲ್ಲಿ ಬಂದಿದ್ದ ಈತ ಆಕೆಯ ಕೈ ಹಿಡಿದು ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದು ಬಾಲಕಿ ಕಿರುಚಾಡುತ್ತಿದ್ದಂತೆ ಆರೋಪಿ ರಾಶಿಕ್ ಪರಾರಿಯಾಗಿದ್ದ ಎನ್ನಲಾಗಿದೆ.