ಬೆಂಗಳೂರು: ಮಾರಕ ಕೊರೋನಾ ವೈರಸ್ ರೂಪಾಂತರಿ ಒಮಿಕ್ರಾನ್ ಆರ್ಭಟ ಶುರುವಾಗಿದೆ. ರಾಜ್ಯಕ್ಕೂ ಈ ಹೊಸ ವೈರಸ್ ಕಾಲಿಟ್ಟಿದೆ. ಕರ್ನಾಟಕದಲ್ಲಿ ಮೊದಲ ಎರಡು ಒಮಿಕ್ರಾನ್ ಕೇಸ್ ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಘೋಷಣೆ ಮಾಡಿದೆ.
ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ B.1.1.529 ತಳಿಯ ಕೇಸ್ಗಳು ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲಾವ ಅಗರವಾಲ್ ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ಬೆಂಗಳೂರಿಗೆ ದಕ್ಷಿಣ ಆಫ್ರಿಕಾದದಿಂದ ಬಂದ ಇಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಧೃಡಪಟ್ಟಿದೆ. ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗೆ ಕ್ವಾರಂಟೈನ್ ಮಾಡಲಾಗಿದೆ. ಯಾರಿಗೂ ಹರಡದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿ ಎಂದರು ಅಗರವಾಲ್. ಇನ್ನು ಓಮಿಕ್ರಾನ್ ಪೀಡಿತರಲ್ಲಿ ಒಬ್ಬರು ಬೊಮ್ಮನಹಳ್ಳಿ ಮೂಲದ ನಿವಾಸಿ,ಇನ್ನೊಬ್ಬರು ಜೆಸಿ ನಗರದ ನಿವಾಸಿ ಎಂದು ತಿಳಿದು ಬಂದಿದೆ.