ಬೆಂಗಳೂರು: ದೇಶದಲ್ಲಿಯೇ ಮೊದಲು ಎಂಬಂತೆ ಕರ್ನಾಟಕದಲ್ಲಿ ಎರಡು ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹೊಸ ತಳಿಯ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಅಲ್ಲದೆ, ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಪಡೆದುಕೊಂಡು ಮುಂದಿನ ನಿರ್ಧಾರ ತಿಳಿಸಲಾಗುವುದೆಂದು ತಿಳಿಸಿದರು.
ಈಗಾಗಲೇ ಕೇಂದ್ರ ಆರೋಗ್ಯ ಸಚಿವರೊಂದಿಗೂ ಕೂಡ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಪತ್ತೆಯಾಗಿರುವ ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುವಂತೆ ಅವರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.



























