ಮಂಗಳೂರು: ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಕಾಶಭವನದಲ್ಲಿ ನಡೆದಿದೆ.
ಮೃತರನ್ನು ಆಕಾಶಭವನ ಕಾಪಿಗುಡ್ಡೆ ನಿವಾಸಿ ಶಿಫಾಲಿ(22) ಎನ್ನಲಾಗಿದೆ.
ಶಿಫಾಲಿ ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದು, ಸಂಜೆ ಕೆಲಸ ಮುಗಿಸಿ ಎಂದಿನಂತೆ ಮನೆಗೆ ಬಂದಿದ್ದು, ಮನೆಗೆ ಬಂದವರೇ ಕೋಣೆಗೆ ತೆರಳಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯವರು ಆಕೆಯನ್ನು ರಕ್ಷಣೆ ಮಾಡುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.