ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ(ರಿ) ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ(ರಿ) ಸವಣೂರು, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇದರ ಸಹಯೋಗದೊಂದಿಗೆ ಯುವಜನೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿರುವ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಸಂಪ್ಯದಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ರೈ ಯವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದಂತಹ ಸೀತಾರಾಮ ರೈ ಸವಣೂರು, ನವೀನ್ ಭಂಡಾರಿ, ಪುತ್ತೂರು ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್,ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್,ನಿವೃತ್ತ ಸೈನಿಕ ಮಾಧವ ಬಿ.ಕೆ., ಪುತ್ತೂರು ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ದಿನೇಶ್ ಸಾಲಿಯಾನ್ ಹಾಗೂ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.