ಮಂಗಳೂರು: ರಾಜ್ಯದ ಕಾನೂನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಪರೀಕ್ಷೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಖಂಡಿಸಿ ಡಿ.4 ರಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮಂಗಳೂರು ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಎಸ್.ಡಿ. ಎಂ. ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ನಡೆದು, ಬಿಜೆಪಿ ಕಚೇರಿಯ ವರೆಗೆ ಜಾಥಾ ನಡೆಸಲಾಯಿತು.
ಪುನರಾವರ್ತಿತ ವಿದ್ಯಾರ್ಥಿಗಳಿಗೆ ಅವರ ಪರೀಕ್ಷೆಯನ್ನು ಅವರ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ದೃಷ್ಟಿಯಿಂದ ಕೂಡಲೇ ನಡೆಸಿ ಫಲಿತಾಂಶ ಪ್ರಕಟಿಸಬೇಕು. ಕೂಡಲೇ ಕೆ.ಎಸ್.ಎಲ್.ಯು ವಿವಿಯ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ನೀಡಬೇಕು ಎಂದು ಪ್ರತಿಭಟನೆಯಲ್ಲಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾಲ್ ಆಳ್ವ, ಕಾರ್ಯಾಲಯ ಪ್ರಮುಖ್ ಅಭಿ ಶೆಟ್ಟಿ, ವಿದ್ವತ್ ಪ್ರಮುಖ್ ಶ್ರೀಪಾದ ಹಾಗೂ ಮತ್ತಿತರರು ಉಪಸ್ಥಿತರಿದ್ದರು.