ನಿರಂತರವಾಗಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ SDPI ಮುಖಂಡ ರಿಯಾಜ್ ಫರಂಗಿಪೇಟೆ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಮೋರ್ಚಾ ವತಿಯಿಂದ ಮಂಗಳೂರು ನಗರದ ಉಪ ಪೋಲಿಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಸಕಾರಾತ್ಮಕವಾಗಿ ಸ್ಪಂದಿಸಿದ ಪೋಲಿಸ್ ಉಪ ಆಯುಕ್ತರು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಗುರುದತ್ ನಾಯಕ್, ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್ ಮಾರ್ನಾಡ್, ಉಪಾಧ್ಯಕ್ಷರಾದ ರಾಕೇಶ್ ಸಾಲ್ಯಾನ್, ಕಾರ್ಯದರ್ಶಿ ಗೌತಮ್ ಕೋಡಿಕಲ್, ಸದಸ್ಯರಾದ ಶಿವು, ಸತೀಶ್ ಮರವೂರು ಜೊತೆಗಿದ್ದರು.