ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲ ಘಟಕದ ವತಿಯಿಂದ ಲೋಕಕಲ್ಯಾಣಾರ್ಥವಾಗಿ ಏಳನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲ ಘಟಕದ ಗೌರವಾಧ್ಯಕ್ಷರಾದ ಶ್ರೀಕೃಷ್ಣ ಭಟ್ ಮುಂಡ್ಯ ವಹಿಸಿದ್ದರು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿಂದು ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೆ ಟಿ, ಜಿಲ್ಲಾ ಅಧ್ಯಕ್ಷರಾದ ಜಗದೀಶ್ ನೇತ್ತರಕೆರೆ ಭಾಗವಹಿಸಿದ್ದರು.
ಖ್ಯಾತ ವಕೀಲರಾದ ಪ್ರಸಾದ್ ಕುಮಾರ್ ಬಿ ಸಿ ರೋಡ್ ಧಾರ್ಮಿಕ ಉಪನ್ಯಾಸ ನಡೆಸಿಕೊಟ್ಟರು ,ವೇದಿಕೆಯಲ್ಲಿ ದೇವಸ್ಥಾನ ಪ್ರಧಾನ ಅರ್ಚಕರಾದ ರವೀಂದ್ರನಾಥ ಮನಿಲಾತ್ತಾಯ, ಹಿಂದು ಜಾಗರಣ ವೇದಿಕೆ ಈಶ್ವರಮಂಗಲ ಘಟಕದ ಅಧ್ಯಕ್ಷ ಯೋಗೀಶ್ ಅರ್ಥಿಯಡ್ಕ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಮಡ್ಯಲಮಜಲು ಉಪಸ್ಥಿತರಿದ್ದರು.
ಕೊರೊನಾ ವಾರಿಯರ್ಸ್ ಗಳಾಗಿ ದುಡಿದ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಪೋಲಿಸ್ ಇಲಾಖೆ,ಅಂಗನವಾಡಿ ಕಾರ್ಯಕರ್ತೆಯರನ್ನು ಈ ಸಂಧರ್ಭದಲ್ಲಿ ಗೌರವಿಸಲಾಯಿತು ಮತ್ತು ಸಹಭೋಜನ ವ್ಯವಸ್ಥೆ ಮಾಡಲಾಯಿತು.
ಪೂಜಾ ಕಾರ್ಯಕ್ರಮವನ್ನು ಸಂಸ್ಕೃತ ಭಾರತ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಮಂಜುನಾಥ ಉಡುಪ ಕುಂಟಾರು ರವರ ನೇತೃತ್ವದಲ್ಲಿ ನಡೆಸಿಕೊಟ್ಟರು. ನಿಶಾಂತ್ ಕುತ್ಯಾಲ ಸ್ವಾಗತಿಸಿ, ಅಶೋಕ್ ಸುರುಳಿಮುಳೆ ವಂದಿಸಿದರು,ರಾಜೇಂದ್ರ ಪ್ರಸಾದ್ ರೈ ಮೇನಾಲ ಕಾರ್ಯಕ್ರಮ ನಿರೂಪಿಸಿದರು.