ಬಂಟ್ವಾಳ: ಇಂದು ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ರವರ ಹೆಸರಿನಲ್ಲಿ ಯಾರೋ ದುಷ್ಕರ್ಮಿಗಳು ನಕಲಿ ಫೇಸ್ಬುಕ್ ಖಾತೆಯನ್ನು ಸೃಷ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್ ಕುಮಾರ್ ಶೆಟ್ಟಿ ರವರು, ‘ನಾನು ಈ ವಿಷಯದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ’, ‘ನಾನು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದರಿಂದ ಯಾರೋ ದುಷ್ಕರ್ಮಿಗಳು ಈ ರೀತಿಯ ಕೃತ್ಯವೆಸಗಿದ್ದಾರೆ’ ಎಂದರು.
ಅಶೋಕ್ ಶೆಟ್ಟಿ ರವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅಶ್ಲೀಲ ಚಿತ್ರಗಳನ್ನು ಶೇರ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.