ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿಜಿಸ್ಟ್ರಾರ್ ವಿಟ್ಲ ಇದರ ಕಲ್ಲಡ್ಕ ವಲಯದ ಪದಗ್ರಹಣದ ಪ್ರಯುಕ್ತ ಕಲ್ಲಡ್ಕ ಒಕ್ಕೂಟದ ಸದಸ್ಯರಿಗೆ ಆಟೋಟ ಸ್ಪರ್ಧೆ ಬೊಂಡಲ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಆಟೋಟ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಕಲ್ಲಡ್ಕ ಒಕ್ಕೂಟದ ಅಧ್ಯಕ್ಷರಾದ ತುಳಸಿ ಅಧ್ಯಕ್ಷತೆಯಲ್ಲಿ ಬೊಂಡಾಲ ಮಹಾಗಣಪತಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಜನಾರ್ದನ ಕುಲಾಲ್ ಹಾಗೂ ವಿನೋದ್ ಶೆಟ್ಟಿ ಇವರು ದೀಪ ಬೆಳಗಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗೋಲ್ತಮಜಲು ಪಂಚಾಯತ್ ಸದಸ್ಯರಾದ ಲಕಿತ ಆರ್ ಶೆಟ್ಟಿ, ಲಲಿತಾ ಹಾಗೂ ಸ್ವಸಹಾಯ ಸಂಘದ ಪ್ರಬಂಧಕರಾದ ವೆಂಕಟರಾಯ ಪ್ರಭು, ಕಲ್ಲಡ್ಕ ಒಕ್ಕೂಟದ ಉಪಾಧ್ಯಕ್ಷರಾದ ಪದ್ಮನಾಭ ,ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಾ ಶೆಟ್ಟಿ, ಸೇವಾ ಪ್ರತಿನಿಧಿ ಸೌಮ್ಯ, ಹಾಗೂ ಕಲ್ಲಡ್ಕ ಒಕ್ಕೂಟದ ಸ್ವಸಹಾಯ ಸಂಘದ ಎಲ್ಲ ಸದಸ್ಯರು ಉಪಸ್ಥಿತರಿದ್ದರು.
ಆಟೋಟ ಸ್ಪರ್ಧೆ ಬಳಿಕ ಜೀರ್ಣೋದ್ಧಾರಗೊಳ್ಳುತ್ತಿರುವ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಶ್ರಮದಾನದಲ್ಲಿ ಎಲ್ಲಾ ಸದಸ್ಯರು ಭಾಗವಹಿಸಿದರು.