ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಬಾಳಿಲದ ದೋಳೋಡಿ ರಾಮಚಂದ್ರ ಮಣಿಯಾಣಿ (51) ಎನ್ನಲಾಗಿದೆ.
ರಾಮಚಂದ್ರ ರವರು ಭಾನುವಾರ ಮನೆಯಿಂದ ಕಾಣೆಯಾಗಿದ್ದರು ಎನ್ನಲಾಗಿದೆ. ಇವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಪೆರುವಾಜೆಯಲ್ಲಿ ಇವರ ತಮ್ಮನ ಜಾಗವಿದ್ದು, ಜಾಗದ ಪಕ್ಕದ ಅರಣ್ಯ ಪ್ರದೇಶದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.