ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿತ ಆರೋಪಿ ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಖಾಸಗಿ ಶಾಲೆಯೊಂದರ ಆಡಳಿತ ಅಧಿಕಾರಿ ಅನಿಲ್ ಕುಮಾರ್ ಎಂಬಾತನಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿರುವ ಶಾಲೆಯೊಂದರ ಆಡಳಿತ ಅಧಿಕಾರಿ ಅನಿಲ್ ಕುಮಾರ್ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊರ್ವಳಿಗೆ ಸೈಕಲ್ ಕಲಿಸಿಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಅನಿಲ್ ಕುಮಾರ್ ತನ್ನ ಪರ ವಕೀಲರಾದ ಮಹೇಶ್ ಕಜೆ ಯವರ ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.