ತಮಿಳುನಾಡಿನ ಕುನೂರ್ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿದ್ದ ಬಿಪಿನ್ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ.
ಟ್ವೀಟ್ ಮಾಡಿರುವ ಇಂಡಿಯನ್ ಏರ್ಫೋರ್ಸ್, ‘ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್ನಲ್ಲಿದ್ದ ಇತರ 11 ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ’ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ.
ಬಿಪಿನ್ ರಾವತ್ ಯಾರು..?
ಬಿಪಿನ್ ರಾವತ್ ಉತ್ತರಾಖಂಡನ್ನ ಪೌರಿಯಲ್ಲಿ 1958ರಲ್ಲಿ ಜನಿಸಿದ್ದರು. ತಂದೆ ಲಕ್ಷ್ಮಣ್ ಸಿಂಗ್, ನಿವೃತ್ತ ಲೆಫ್ಟಿನೆಂಟ್ ಜನೆರಲ್ ಆಗಿ ಸೇವೆಸಲ್ಲಿಸಿದ್ದಾರೆ. ಭಾರತದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (2020ರ ಜನವರಿ1 ) ಭಾರತೀಯ ಸೇನೆಯ ಟಾಪ್ ಮೋಸ್ಟ್, 4 ಸ್ಟಾರ್ ಸೈನ್ಯಾಧಿಕಾರಿ, ಲಡಾಖ್ ಬಿಕ್ಕಟ್ಟಿನ ವೇಳೆ ಚೀನಾ ವಿರುದ್ಧ ವ್ಯೂಹ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಾರತ ರಕ್ಷಣಾ ರಂಗದಲ್ಲಿ ಕ್ರಾಂತಿಕಾರಕ ಸುಧಾರಣೆಗಳನ್ನು ತಂದವರು. ತ್ರಿವಿಧ ದಳಗಳ 17 ಕಮಾಂಡ್ಗಳನ್ನು ಸೇರಿಸುವ ಗುರುತರ ಹೊಣೆ ಹೊತ್ತಿದ್ದರು. (ಇಂಟಿಗ್ರೇಟೆಡ್ ಥೇಟರ್ ಕಮಾಂಡ್). ತ್ರ್ರಿವಿಧ ದಳಗಳು ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕೆಲಸ ಮಾಡಿದ್ದರು.
1987ರಲ್ಲಿ ಸಮ್ದೊರಂಗ್ ಚು ಕಣಿವೆಯಲ್ಲಿ ಚೀನಾ ಎದುರಿಸಿದ್ದ ರಾವತ್ ನೇತೃತ್ವದ ಪಡೆ, 2015ರಲ್ಲಿ ಮಯನ್ಮಾರ್ ಗಡಿಗೆ ನುಗ್ಗಿ ರಾವತ್ ನೇತೃತ್ವದ 3 ಕಾಪ್ರ್ಸ್ ಕಾರ್ಯಾಚರಣೆ ನಡೆಸಿದ್ದರು. ಬಿಪಿನ್ ಪತ್ನಿ ಮಧುಲಿಕಾ ಸೈನಿಕರ ಮಕ್ಕಳ ಅಭಿವೃದ್ಧಿಗಾಗಿ, ಸೈನಿಕರ ಶ್ರೇಯೋಭಿವೃದ್ಧಿಗಾಗಿ ಎಡಬ್ಲ್ಯೂಡಬ್ಲ್ಯೂಎ ಎನ್ನುವ ಸರ್ಕಾರೇತರ ಸಂಸ್ಥೆ ನಡೆಸ್ತಿದ್ರು. ಈ ಮೂಲಕ ಯೋಧರ ಕುಟುಂಬಗಳಿಗೆ ಮಧುಲಿಕಾ ನೆರವಿನ ಹಸ್ತ ಚಾಚಿದ್ದರು. ಯೋಧರ ಪತ್ನಿಯರಿಗೆ ಸ್ವಯಂ ಉದ್ಯೋಗದ ತರಬೇತಿ ನೀಡುತ್ತಿದ್ದರು.