ಪುತ್ತೂರು: ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿತ್ತು.
ಚುನಾವಣೆ ಡಿ.10 ರಂದು ಸಂಜೆ 4 ಗಂಟೆಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಸಂಜೆ 6 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯದಂಗಡಿಗಳನ್ನು ತೆರೆದು ಕಾರ್ಯಾಚರಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.