ವಿಟ್ಲ: ಅನಾರೋಗ್ಯದಿಂದಾಗಿ ಕೆಲದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಂಗಿಲಪದವು ಪಾದೆ ನಿವಾಸಿ ಕರುಣಾಕರ ಗೌಡ(38) ಚಿಕಿತ್ಸೆ ಫಲಕಾರಿಯಾಗದೇ ಡಿ.10 ರಂದು ನಿಧನರಾದರು.
ಕರುಣಾಕರ ರವರು ಫ್ಲಿಪ್ ಕಾರ್ಟ್ ನಲ್ಲಿ ಉದ್ಯೋಗದಲ್ಲಿದ್ದು, ಒಂದು ವಾರದ ಹಿಂದೆ ಮನೆಯ ಬಾತ್ ರೂಮ್ ನಲ್ಲಿ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.