ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್‌ನ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಅನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕ-ಯುವತಿಯ ಮೇಲೆ 5-6 ಜನ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ.
ಈ ಘಟನೆ ನಿನ್ನೆ 1 ಗಂಟೆಗೆ ನಡೆದಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಸುಮೋಟೊ ಕೇಸ್ ದಾಖಲಿಸಿದ್ದು, ಇದೀಗ 2 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯುವಕ-ಯುವತಿಯನ್ನು ಕರೆದು ಹೆಚ್ಚಿನ ಮಾಹಿತಿ ಪಡೆಯಲಾಗುವುದು. ಉಳಿದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದ್ದಾರೆ.