ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ನಿನ್ನೆ ರಾತ್ರಿ ನಡೆದ ಇರಿತ ಪ್ರಕರಣದ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬವರ ಮೇಲೆ 5 ರಿಂದ 6 ಜನರ ತಂಡ ಬೀರ್ ಬಾಟಲ್ ಸಹಿತ ಇನ್ನಿತರ ವಸ್ತುಗಳಿಂದ ಹಲ್ಲೆ ನಡೆಸಿತ್ತು.
ಕಾರಿನಲ್ಲಿ ಮಹಿಳೆಯ ಚಪ್ಪಲ್ ದೊರೆತಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ಕೈಗೆತ್ತಿಕೊಂಡಿದ್ದಾರೆ, ಶೀಘ್ರದಲ್ಲೇ ಆರೋಪಿಗಳ ಬಂಧನ ಸಾಧ್ಯತೆಯಿದೆ ಎಂದಿದ್ದಾರೆ.