ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಹಾಗೂ ಕ್ಯಾಂಪ್ಕೋ ಇನ್ ಸೇವಾ ಜಂಟಿಯಾಗಿ ಮನೆ ನಿರ್ಮಾಣ ಮಾಡಿ ಪುತ್ತೂರು ತಾಲೂಕಿನ ನೈತಾಡಿಯ ಬಡ ಕುಟುಂಬಕ್ಕೆ ಹಸ್ತಾಂತರಿಸಿದರು.
ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮನೆಯನ್ನು ಹಸ್ತಾಂತರಿಸಿ ಆಶೀವರ್ಚನ ನೀಡಿದರು. ವಿಶ್ವ ಹಿಂದೂ ಪರಿಷದ್ ಪ್ರಾಂತ ಕಾರ್ಯಾಧ್ಯಕ್ಷ ಫ್ರೊ. ಎಂ ಬಿ ಪುರಾಣಿಕ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಭಾಗ ಸಂಘಚಾಲಕ ಗೋಪಾಲ್ ಚೆಟ್ಟಿಯಾರ್, ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್, ವಿಶ್ವ ಹಿಂದು ಪರಿಷದ್ ಪ್ರಾಂತ ಸಂಘಟನಾ ಕಾರ್ಯದರ್ಶಿ ಬಸವರಾಜ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಉಪಾಧ್ಯಕ್ಷ ಯು ಪೂವಪ್ಪ, ಪುತ್ತೂರು ಜಿಲ್ಲಾಧ್ಯಕ್ಷ ಡಾ ಕೃಷ್ಣಪ್ರಸನ್ನ, ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಉಪಸ್ಠಿತರಿದ್ದರು.
ಕೆಮ್ಮಿಂಜಿ ಶ್ರೀ ಷಣ್ಮುಖ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಳ್ಳಕುರಾಯ ಧಾರ್ಮಿಕ ವಿಧಿಗಳನ್ನು ನೆರವೇರಿಸಿದರು. ವಿಹಿಂಪ ನಗರ ಪ್ರಖಂಡ ಅಧ್ಯಕ್ಷ ಜನಾರ್ಧನ ಬೆಟ್ಟ ಸ್ವಾಗತಿಸಿ, ವಿಶಾಕ್ ಸಸಿಹಿತ್ಲು ವಂದಿಸಿದರು. ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ ಕಾರ್ಯಕ್ರಮ ನಿರ್ವಹಿಸಿದರು.