ಮಂಗಳೂರು: ಬಿಪಿನ್ ರಾವತ್, ದೋವಲ್ ಕುರಿತ ಅವಹೇಳನಕಾರಿ ಕಾಮೆಂಟ್ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಜ್ಞರ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸುಶಾಂತ್ ಎಂಬವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ’ ಎಂದರು.