ಸವಣೂರು: ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಸುಬ್ರಹ್ಮಣ್ಯೇಶ್ವರ ದೇವಳದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಡಿ.21ರಿಂದ 28ರ ತನಕ ನಡೆಯಲಿದ್ದು, ಆಮಂತ್ರಣ ಪತ್ರಿಕೆಯ ವಿತರಣೆ ಶನಿವಾರ ಪುತ್ತೂರು ನಗರದಲ್ಲಿ ನಡೆಯಿತು.
ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಬೊಳುವಾರಿನಿಂದ ದರ್ಬೆ ತನಕ ಮೆರವಣಿಗೆ ಮೂಲಕ ಸಾಗಿ ಸಾರ್ವಜನಿಕರಿಗೆ ವಿತರಿಸಿದರು. ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ವಿ.ಎಸ್.ಭಟ್ ಅವರು ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ರವರು, ಈಗಾಗಲೇ ದೇವಳದ ಜೀರ್ಣೋದ್ಧಾರ ಕಾರ್ಯ ಸಂಪೂರ್ಣಗೊಂಡಿದ್ದು, ಬ್ರಹ್ಮಕಲಶೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಪುಣ್ಯ ಕಾರ್ಯದಲ್ಲಿ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿ ಕೊಂಡರು.
ಸುಬ್ರಹ್ಮಣ್ಯೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಪ್ರಧಾನ ಕಾರ್ಯದರ್ಶಿ ಆನಂದ ಪೂಜಾರಿ ಸರ್ವೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಸಾದ್ ರೈ ಸೊರಕೆ, ಪ್ರಧಾನ ಅರ್ಚಕ ಶ್ರೀರಾಮ ಕಲ್ಲೂರಾಯ, ವಿವಿಧ ಸಮಿತಿಗಳ ಪ್ರಮುಖರಾದ ಶಿವರಾಮ ಭಟ್, ಜಿ.ಕೆ. ಪ್ರಸನ್ನ ಕಲ್ಲಗುಡ್ಡೆ, ವಿನಯ್ ಕುಮಾರ್ ರೈ ಸರ್ವೆ, ಚಂದ್ರಶೇಖರ ಎಸ್.ಎಸ್.ಡಿ, ಲೋಕೇಶ್ ಗೌಡ ತಂಬುತ್ತಡ್ಕ, ಅಶೋಕ ನಾಯ್ಕ ಸೊರಕೆ, ಬೆಳಿಯಪ್ಪ ಗೌಡ, ರಾಧಾಕೃಷ್ಣ ರೈ ರೆಂಜಲಾಡಿ, ಕುಕ್ಕ ಮತ್ತಿತರರು ಉಪಸ್ಥಿತರಿದ್ದರು.