ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಬದಿಯ ಗುಡ್ಡಕ್ಕೆ ಡಿಕ್ಕಿಯೊಡೆದ ಘಟನೆ ಡಿ.12 ರಂದು ವಿಟ್ಲ ನೀರಕಣಿ ಎಂಬಲ್ಲಿ ನಡೆದಿದೆ.
ಕಾರು ಮುಡಿಪಿನಿಂದ ಪೆರ್ಲ ಕಡೆಗೆ ಹೋಗುತ್ತಿದ್ದು, ನೀರಕಣಿ ಎಂಬಲ್ಲಿ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಹಿಳೆಯ ತಲೆಯ ಭಾಗಕ್ಕೆ ಗಾಯವಾಗಿದ್ದು, ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.