ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಬಳಿ ನಡೆದಿದೆ.
ಬಾಲಕಿಯನ್ನು ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಯಾನಂದ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ಜಯಾನಂದ ಡಿ. 11ರಂದು ಮಧ್ಯಾಹ್ನ ಬಾಲಕಿಯ ಮನೆಗೆ ತೆರಳಿ ಆಕೆಯನ್ನು ಪುಸಲಾಯಿಸಿ ನಿರ್ಮಾಣ ಹಂತದಲ್ಲಿರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ. ತನ್ನ ಮೊಬೈಲ್ ನಲ್ಲಿದ್ದ ಅಶ್ಲೀಲ ಚಿತ್ರಗಳನ್ನು ತೋರಿಸಿದ್ದು, ಈ ವೇಳೆ ಹೆದರಿದ ಬಾಲಕಿ ಬೊಬ್ಬೆ ಹೊಡೆದಿದ್ದು, ಬೊಬ್ಬೆ ಹೊಡೆದರೆ ಕೊಲ್ಲುವುದಾಗಿ ಆರೋಪಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.