ಹಾಸನ: ಎಂಎಲ್‌ಸಿ ಚುನಾವಣೆಯಲ್ಲಿ ಬಿಜೆಪಿ ಕೊಡಗಿನಲ್ಲಿ ಮೊದಲ ಖಾತೆ ತೆರೆದರೆ ಹಾಸನದಲ್ಲಿ ರೇವಣ್ಣ ಪುತ್ರ ಡಾ. ಸೂರಜ್ ರೇವಣ್ಣ ಮೊದಲ ಗೆಲುವು ದಾಖಲಿಸಿದ್ದಾರೆ. ಅದೂ 1000ಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.
ಕಾಂಗ್ರೆಸ್-ಬಿಜೆಪಿ ಫೈಟ್ ನೀಡಿದ್ದರೂ, ದೇವೇಗೌಡ ಮೊಮ್ಮಗ ಅನಾಯಾಸವಾಗಿ ಗೆಲುವು ದಾಖಲಿಸಿದ್ದಾರೆ.
ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಗೆಲುವು ಸಾಧಿಸಿದ್ದಾರೆ. 3570 ಒಟ್ಟು ಮತಗಳು ಚಲಾವಣೆಯಾಗಿದ್ದವು. ಕಾಂಗ್ರೆಸ್ ಅಭ್ಯರ್ಥಿಗೆ 700 ಮತಗಳು ದೊರಕಿದ್ದವು. ಈ ಹಿಂದೆ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದರು.




























