ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯೊಡೆದು, ಇನ್ನೊಂದು ಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆಯ ಕಲ್ಲಾರೆ ಕಾನಾವು ಕ್ಲಿನಿಕ್ ಬಳಿ ನಡೆದಿದೆ.
ದರ್ಬೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯೊಡೆದು, ಇನ್ನೊಂದು ಬದಿಗೆ ಜಂಪ್ ಆಗಿ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಮತ್ತೊಂದು ಕಾರಿಗೆ ಡಿಕ್ಕಿಯೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಏರ್ ಬ್ಯಾಗ್ ಓಪನ್ ಆಗಿದ್ದು, ಈ ಹಿನ್ನೆಲೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೋಲಿಸರು ಆಗಮಿಸಿ ಪರೀಶಿಲನೆ ನಡೆಸುತ್ತಿದ್ದಾರೆ.