ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ವಾಟ್ಸಪ್ ಮೂಲಕ ಅಪರಿಚಿತ ಕರೆ ಮತ್ತು ಸಂದೇಶ ರವಾನೆ ಮಾಡಿ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು, ಈ ಕುರಿತು ವಿದ್ಯಾರ್ಥಿ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೊಂಬೆಟ್ಟು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಗೆ ಅಪರಿಚಿತ ನಂಬರ್ ನಿಂದ ವಾಟ್ಸಪ್ ಮೂಲಕ ಸಂದೇಶ ಮತ್ತು ಆತನ ವಿದ್ಯಾರ್ಥಿ ಫೋಟೋ ಕಳಿಸಿ ಧರ್ಮಕ್ಕೆ ನಿಂದಿಸಿ ಬೆದರಿಕೆಯೊಡ್ಡಿದ್ದಾರೆಂದು ವಿದ್ಯಾರ್ಥಿ ಆರೋಪಿಸಿದ್ದಾನೆ.