ಪುತ್ತೂರು: ಪಿಎಫ್ಐ ಕಾರ್ಯಕರ್ತರು ಉಪ್ಪಿನಂಗಡಿಯಲ್ಲಿ ಪೊಲೀಸರ ಮೇಲೆ ನಡೆಸಿದ ಹಲ್ಲೆಯನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಖಂಡಿಸಿದೆ.
ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಬಂಟ್ವಾಳ ಗ್ರಾಮಾಂತರ ಠಾಣಾ ಎಸ್ ಐ ಪ್ರಸನ್ನ ಹಾಗೂ ಮಹಿಳಾ ಪಿಎಸ್ಐ ವಾಮನ ರವರ ಮೇಲೆ ಹಾಗೂ ಇತರ ಪೊಲೀಸರ ಮೇಲೆ ನಡೆದ ಹಲ್ಲೆ ಮತ್ತು ಅಪ್ರಚೋದಿತ ಹಿಂಸಾಚಾರ ವನ್ನು ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಅತ್ಯುಘ್ರವಾಗಿ ಖಂಡಿಸುತ್ತದೆ., ಹಾಗೂ ಈ ಕೃತ್ಯದಲ್ಲಿ ಭಾಗಿಯಾದ ಪಿಎಪ್ ಐ, ಎಸ್ಡಿಪಿಐ ಕಾರ್ಯಕರನ್ನು ಈ ಕೂಡಲೇ ಬಂಧಿಸಿ ಕಠಿಣ ಕಾನೂನು ಜರುಗಿಸಬೇಕು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.