ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೆ.ಯಸ್‍ರವರು, ‘2007ರಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸಲಾಗಿದೆ. ಕೋವಿಡ್ ಕಾರಣದಿಂದಾಗಿ ಎರಡು ಬಾರಿ ಬ್ರಹ್ಮಕಲಶ ಮುಂದೂಡಿಕೆಯಾಗಿದೆ. ಇದೀಗ ಸರ್ವ ಭಕ್ತರ ಸಹಕಾರದೊಂದಿಗೆ ಡಿ.21ರಿಂದ 27ರವರೆಗೆ ಬ್ರಹ್ಮಕಲಶ ನಡೆಸಲು ನಿರ್ಧರಿಸಲಾಗಿದ್ದು ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ವಿವಿಧ ಧಾರ್ಮಿಕ, ಸಾಂಸ್ಕಂತಿಕ ಮತ್ತು ಅನ್ನಸಂತರ್ಪಣೆಯೊಂದಿಗೆ ನೆರವೇರಲಿದೆ.