ಉಡುಪಿ: ಬೈಕ್‌ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಹಿನ್ನೆಲೆ ಪೊಲೀಸರು 10 ಕೆ.ಜಿ ಮಾಂಸ ವಶಪಡಿಸಿ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಡಿ.17 ರಂದು ಮಜೂರು ಕಡೆಯಿಂದ ಶಿರ್ವಾ ಕಡೆಗೆ ಮೋಟಾರ್ ಸೈಕಲಿನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ದೊರೆತಿದೆ.
ಈ ಹಿನ್ನೆಲೆಯಲ್ಲಿ ಶಿರ್ವ ಸೈಂಟ್ ಮೆರೀಸ್ ಜಂಕ್ಷನ್ ಬಳಿ ಸಂಶುದ್ದೀನ್ ಎಂಬಾತ ಚಲಾಯಿಸುತ್ತಿದ್ದ ಬೈಕ್ ಒಂದನ್ನು ನಿಲ್ಲಿಸಿ ತಪಾಸಣೆ ನಡೆಸಿದ ವೇಳೆ ಬೈಕ್‌ನ ಪೆಟ್ರೋಲ್ ಟ್ಯಾಂಕಿನ ಮೇಲೆ ಒಂದು ನೈಲಾನ್ ಚೀಲದಲ್ಲಿ 10 ಪ್ಲಾಸ್ಟಿಕ್ ತೊಟ್ಟೆಯಲ್ಲಿ 10 ಕೆ.ಜಿ ದನದ ಮಾಂಸ ಇತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ಅದನ್ನು ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ಆತ ತಿಳಿಸಿದ್ದಾನೆ.
ದನದ ಮಾಂಸ ಮಾರಾಟ ಮಾಡಲು ಪರವಾನಿಗೆ ಬಗ್ಗೆ ವಿಚಾರಿಸಿದಲ್ಲಿ ಯಾವುದೇ ಪರವಾನಿಗೆ ಇರುವುದಿಲ್ಲ ಎಂಬುದಾಗಿ ತಿಳಿಸಿದ್ದು, ಈ ಬಗ್ಗೆ ಶಿರ್ವಾ ಪೊಲೀಸ್ ಠಾಣಾ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅದ್ಯಾದೇಶ 2020 ರಂತೆ ಪ್ರಕರಣ ದಾಖಲಾಗಿದೆ.