ವಿಟ್ಲ: ಮುಡ್ನೂರು ಗ್ರಾಮದ ಪಿಲಿಂಜ ಎಂಬಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ದೈವಸ್ಥಾನವೊಂದರ ಸಮಿತಿ ಪದಾಧಿಕಾರಿಗಳೊಂದಿಗೆ ಕುಂಡಡ್ಕದಲ್ಲಿರುವ ದೈವಸ್ಥಾನವೊಂದಕ್ಕೆ ಪ್ರಾರ್ಥನೆ ಸಲ್ಲಿಸಲು ತೆರಳಿದ್ದ ಬಿಲ್ಲವ ಸಮುದಾಯದ ಇಬ್ಬರು ಯುವಕರನ್ನು ಅಲ್ಲಿನ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಓರ್ವರು ಹೊರಕ್ಕೆ ಕಳುಹಿಸಿದ ವಿಚಾರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಡಿ.18 ರಂದು ಸಾಯಂಕಾಲ ಕುಂಡಡ್ಕ, ವಿಟ್ಲ ವ್ಯಾಪ್ತಿಯ ಬಿಲ್ಲವ ಸಂಘಟನೆಗಳು, ವಿಟ್ಲ ಯುವವಾಹಿನಿ ಸದಸ್ಯರು ವಿಟ್ಲದಲ್ಲಿ ಖಂಡನಾ ಸಭೆ ನಡೆಸಿದ್ದು, ಬಳಿಕ ದೈವಸ್ಥಾನದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಕ್ಷಮಾಪಣೆ ಕೋರಿದ ಹಿನ್ನೆಲೆಯಲ್ಲಿ ಈ ಪ್ರಕರಣ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.