ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.21ರಿಂದ 27ರವರಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಮನರಂಜನೆಗಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಡಿ.22 ರಂದು ರಾತ್ರಿ 8 ಗಂಟೆಗೆ ದಕ್ಷಿಣ ಕನ್ನಡದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ, ‘ಆಳ್ವಾಸ್’ ವಿದ್ಯಾಸಂಸ್ಥೆಯಿಂದ ‘ಕಲಾ ಸಂಭ್ರಮ’ ಸಾಂಸ್ಕೃತಿಕ ಕಾರ್ಯಕ್ರಮ ಮೂಡಿಬರಲಿದೆ..