ಬಂಟ್ವಾಳ: ಇಡ್ಕಿದು ಸೇವಾ ಸಹಕಾರಿ ಸಂಘ (ನಿ.) ಇದರ ಶತಮಾನೋತ್ಸವದ ನೂತನ ಕಟ್ಟಡ ‘ಶತಾಮೃತ’ದ ಉದ್ಘಾಟನೆಯು ಡಿ.25 ರಂದು ನಡೆಯಲಿದೆ.
‘ಶತಾಮೃತ’ದ ಉದ್ಘಾಟನೆಯನ್ನು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರು ನೆರವೇರಿಸಲಿದ್ದಾರೆ. ಬ್ಯಾಂಕಿಂಗ್ ವಿಭಾಗದ ಉದ್ಘಾಟನೆಯನ್ನು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ರವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರು, ಮತ್ತು ಶ್ರೀರಾಮ ವಿದ್ಯಾಕೇಂದ್ರದ ಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ರವರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯ ಅತಿಥಿಗಳು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಂಜೆ 4.30 ರಿಂದ 6.30 ರವರೆಗೆ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ‘ಯಕ್ಷಗಾನ ನಾಟ್ಯ ವೈಭವ’ ಕಾರ್ಯಕ್ರಮ ಮೂಡಿ ಬರಲಿದೆ.