ವಿಟ್ಲ: ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ಡಿ.21 ರಂದು ಪಡಿಬಾಗಿಲು ಶಾಲೆಯಲ್ಲಿ ನಡೆಯಿತು.
ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಬಾಲಕೃಷ್ಣ ಕಾರಂತ, ಕೇಪು ಗ್ರಾಮ ಪಂಚಾಯತ್ ಸದಸ್ಯರಾದ ಜಗಜ್ಜೀವನ ರಾಮ್ ಶೆಟ್ಟಿ,ಎಸ್.ಡಿ.ಎಂ.ಸಿ ಸದಸ್ಯರಾದ ಜಿನಚಂದ್ರ ಜೈನ್, ರೇಖಾ, ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿದರು.
ಮುಖ್ಯ ಶಿಕ್ಷಕಿ ಶಶಿಕಲಾ. ಎನ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಸಹ ಶಿಕ್ಷಕಿ ಲಲಿತಾ ಧನ್ಯವಾದ ಸಲ್ಲಿಸಿದರು, ಪ್ರೌಢ ಶಾಲಾ ಸಹ ಶಿಕ್ಷಕಿ ಪುಷ್ಪಾವತಿ ಕಾರ್ಯಕ್ರಮ ನಿರೂಪಿಸಿದರು.