ಬೆಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನ್ಯಾಯಾಲಯವು ಕಳೆದ ಜೂನ್‌ನಲ್ಲಿ ಮೂವರು ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ಹಾಗೂ ರಾಜೇಶ್ವರಿ ಗೆಳೆಯ ಹಾಗೂ ಅರ್ಚಕ ನಿರಂಜನ್ ಭಟ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ನ್ಯಾಯಾಯಲದ ತೀರ್ಪನ್ನು ಪ್ರಶ್ನಿಸಿ ರಾಜೇಶ್ವರಿ ಶೆಟ್ಟಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
2016 ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಉಡುಪಿಯ ಇಂದ್ರಾಳಿಯಲ್ಲಿರುವ ಅವರ ಮನೆಯಲ್ಲಿ ಅವರ ಹೆಂಡತಿ ರಾಜೇಶ್ವರಿ ಶೆಟ್ಟಿ ಹಾಗೂ ಮಗ ನವನೀತ್ ಶೆಟ್ಟಿ ಸೇರಿ ಹತ್ಯೆಗೈದಿದ್ದರು. ಅವರ ತಲೆಗೆ ಬಲವಾಗಿ ರಾಡ್‌ನಿಂದ ಹೊಡೆದು, ಬಳಿಕ ಶವವನ್ನು ಹೋಮಕುಂಡದಲ್ಲಿ ಸುಟ್ಟು ಹಾಕಲಾಗಿತ್ತು.