ದೆಹಲಿ: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಡಿಸೆಂಬರ್ 24 ಪತನಗೊಂಡಿದ್ದು ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿದ್ದಾರೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮೂಲಕ ಮಾಹಿತಿ ನೀಡಿದೆ.
ರಾಜಸ್ಥಾನದ ಜೈಸಲ್ಮೇರ್ ಬಳಿ ಡಿಸೆಂಬರ್ 24ರ ಸಂಜೆ ಅಪಘಾತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದರು. ವಿಮಾನದ ಪೈಲೆಟ್ಗಾಗಿ ಶೋಧಕಾರ್ಯ ನಡೆಸಲಾಗಿತ್ತು. ವಿಮಾನ ಪತನಗೊಂಡಿರುವ ಖಚಿತ ಸ್ಥಳದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿರಲಿಲ್ಲ..
ಸ್ಯಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ನೇಷನಲ್ ಪಾರ್ಕ್ ಪ್ರದೇಶದಲ್ಲಿ ವಿಮಾನ ಪತನಗೊಂಡಿದೆ ಎಂದು ಜೈಸಲ್ಮೇರ್ ಎಸ್ಪಿ ಅಜಯ್ ಸಿಂಗ್ ತಿಳಿಸಿದ್ದರು. ಸ್ಥಳೀಯ ಪೊಲೀಸರು ಈಗಾಗಲೇ ವಿಮಾನ ಅಪಘಾತ ಪ್ರದೇಶಕ್ಕೆ ಭೇಟಿ ನೀಡಿದ್ದರು.
ವಿಮಾನ ಅಪಘಾತ ಆಗಿರುವ ಬಗ್ಗೆ ಭಾರತೀಯ ವಾಯುಸೇನೆಯ ಟ್ವಿಟರ್ ಹ್ಯಾಂಡಲ್ ಕೂಡ ದೃಢಪಡಿಸಿತ್ತು. ಡಿಸೆಂಬರ್ 24ರ ರಾತ್ರಿ ಸುಮಾರು 8.30 ರ ವೇಳೆಗೆ ಮಿಗ್-21 ಏರ್ ಕ್ರಾಫ್ಟ್ ಪತನವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಲಾಗಿದೆ ಎಂದು ಈ ಮೊದಲು ಟ್ವೀಟ್ ಮಾಡಿತ್ತು. ಘಟನೆಯಲ್ಲಿ ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.