ಚಿಕ್ಕಮಗಳೂರು: ಬಸ್ ಕಂಡಕ್ಟರ್ ಗೆ ಸಾವೊಂದು ಸಂಚರಿಸುತ್ತಿದ್ದ ಬಸ್ನಲ್ಲಿ ಬಂದೆರಗಿದೆ. ನಿರ್ವಾಹಕರೊಬ್ಬರು ಬಸ್ಸಿನಲ್ಲಿಯೇ ಹೃದಯಾಘಾತದಿಂದ ಸಾವಿಗೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ಘಟನೆ ನಡೆದಿದೆ.
ವಿಜಯ್ (43) ಹೃದಯಾಘಾತದಿಂದ ಸಾವನ್ನಪ್ಪಿರುವ ನಿರ್ವಾಹಕ.
ವಿಜಯ್ ಚಿಕ್ಕಮಗಳೂರು-ಉಡುಪಿ ಕೆಎಸ್ಆರ್ಟಿಸಿ (KSRTC) ಬಸ್ ನಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಶನಿವಾರ ಬೆಳಗ್ಗೆ ಚಿಕ್ಕಮಗಳೂರಿನಿಂದ ಉಡುಪಿ ಕಡೆ ಹೊರಟಿದ್ದ ಬಸ್ನಲ್ಲಿ ಈ ಘಟನೆ ನಡೆದಿದೆ.
ಕೊಟ್ಟಿಗೆಹಾರ ಬಳಿ ಸಾಗುವಾಗ ನಿರ್ವಾಹಕ ವಿಜಯ ಕುಮಾರ್ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಚಾಲಕ ಮತ್ತು ಕೊಟ್ಟಿಗೆಹಾರ ನಿಲ್ದಾಣ ನಿರೀಕ್ಷಕ ಬಣಕಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿಂದ ಮೂಡಿಗೆರೆ ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಅಲ್ಲಿ ಅವರು ಮೃತಪಟ್ಟಿದ್ದಾರೆ.



























