ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವಾಗಿ ಬಂಡಾಯವೆದ್ದ ಮೋಹನ್ ಸೇರಾಜೆ ಮತ್ತು ಜಾನ್ ಡಿಸೋಜಾ ರವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಅವರ ಅಧಿಕೃತ ಆದೇಶದ ಮೂಲಕ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ..
ಮೋಹನ್ ಸೇರಾಜೆ ಮತ್ತು ಜಾನ್ ಡಿಸೋಜಾ ರವರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರಿದ ಕಾರಣಕ್ಕಾಗಿ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು ಎನ್ನಲಾಗಿದೆ.