ಪುತ್ತೂರು: ಎಪಿಎಂಸಿ ರಸ್ತೆಯಲ್ಲಿರುವ ಐಎಎಸ್/ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ಪಿಡಿಓ &ಪಂಚಾಯತ್ ಕಾರ್ಯದರ್ಶಿ ಹುದ್ದೆಗಳ ಲಿಖಿತ ಪರೀಕ್ಷೆಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಾಗಾರವು ಡಿ.25 ರಂದು ವಿದ್ಯಾಮಾತಾ ಅಕಾಡೆಮಿಯ ಗೌರವ ತರಬೇತುದಾರ ಅರವಿಂದ ಚೊಕ್ಕಾಡಿಯವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಜಯಕರ್ನಾಟಕ ಸಂಘಟನೆಯ ರಾಜ್ಯ ವಕ್ತಾರ ಪ್ರಕಾಶ್ ರೈ ದೇರ್ಲ ರವರು ವಿದ್ಯಾಮಾತಾ ಅಕಾಡೆಮಿಯ ಸಮಾಜಮುಖಿ ಕಾರ್ಯಕ್ರಮಗಳಿಗೆ ಶುಭ ಹಾರೈಸಿ ವಿದ್ಯಾರ್ಥಿಗಳು ಉತ್ತಮ ಅಧ್ಯಯನ ಮತ್ತು ಕಠಿಣ ಪರಿಶ್ರಮ ಮೂಲಕ ಸರಕಾರಿ ಹುದ್ದೆಗಳನ್ನು ಪಡೆದುಕೊಳ್ಳಲು ಸಲಹೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಡಕೊಳ ಮೈಸೂರಿನ ಆಚಾರ್ಯ ಗುರುಕುಲ ವಿದ್ಯಾಸಂಸ್ಥೆಯ ಆಡಳಿತ ನಿರ್ದೇಶಕಿ ಉಷಾ ಮಂಜುನಾಥ್ ರವರು ಪೂರ್ವ ತಯಾರಿ ಕುರಿತು ಮಾಹಿತಿ ನೀಡಿದರು.
ವಿದ್ಯಾಮಾತಾ ಅಕಾಡೆಮಿಯ ಅಧ್ಯಕ್ಷ ಭಾಗ್ಯೇಶ್ ರೈ ಅತಿಥಿಗಳನ್ನು ಸ್ವಾಗತಿಸಿದರು ಹಾಗೂ ಪ್ರಕಾಶ್ ರೈ ರವರಿಗೆ ವಿದ್ಯಾಮಾತಾ ಅಕಾಡೆಮಿ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತರಬೇತುದಾರರಾದ ವಿಜೇತಾ, ಚಂದ್ರಕಾಂತ್, ಮಿಲನ, ದೀಕ್ಷಿತಾ,ಹರ್ಷಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.