ವಿಟ್ಲ: ಮಾಣಿಲ ಗ್ರಾಮದ ಮುಂಡಮೂಲೆ ನಿವಾಸಿ ನಿವೃತ್ತ ಶಿಕ್ಷಕ ಎಂ.ಗೋಪಾಲಕೃಷ್ಣ ಭಟ್(63) ರವರು ಡಿ.26 ರಂದು ಹೃದಯಾಘಾತದಿಂದ ನಿಧನರಾದರು.
ಗೋಪಾಲಕೃಷ್ಣ ರವರು ಮಾದಕಟ್ಟೆ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ 30ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಬಳಿಕ ಅಳಿಕೆ ಸತ್ಯಸಾಯಿ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ 9ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಭಾರತ ಸೇವಾದಳದ ಶಿಕ್ಷಕರಾಗಿಯೂ ಮೂರು ದಶಕಗಳಿಂದ ಸೇವೆ ಸಲ್ಲಿಸಿದ್ದ ಇವರು ತಾಳಮದ್ದಳೆ ಮತ್ತು ಹವ್ಯಾಸಿ ಯಕ್ಷಗಾನ ವೇಷಧಾರಿಯಾಗಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.