ವಿಟ್ಲ: 42 ಮಂದಿ ಅಭ್ಯರ್ಥಿಗಳು ಕಣದಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಇಂದು ಮುಂಜಾನೆಯಿಂದ ಆರಂಭವಾಗಿದ್ದು, ಬೆಳಿಗ್ಗೆನಿಂದಲೇ ಮತದಾರರು ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ.
ವಿಟ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಒಕ್ಕೆತ್ತೂರು ಸರ್ಕಾರಿ ಶಾಲೆ, ವಿಠಲ ಪದವಿ ಪೂರ್ವ ಕಾಲೇಜು, ಮೇಗಿನ ಪೇಟೆ, ಮತಗಟ್ಟೆಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 10 ಗಂಟೆ ವೇಳೆ ಶೇ.20 ಮತದಾನವಾಗಿದೆ.
ಕೆಲವು ಮತಗಟ್ಟೆಯಲ್ಲಿ ಜನರಿಲ್ಲದೇ ಬಿಕೋ ಎನ್ನುತ್ತಿದ್ದು, ಜನರು ಬೆಳಿಗ್ಗೆ ಮತದಾನ ಕೇಂದ್ರ ಆಗಮಿಸಿಲ್ಲ. ಕೆಲವು ಕಡೆಗಳಲ್ಲಿ ಮಾತ್ರ ಜನ ಮತ ಚಲಾಯಿಸಲು ಸಾಲು ಗಟ್ಟಿದ್ದಾರೆ..
7161 ಮಂದಿ ಪುರುಷ ಮತದಾರರು, 7554 ಮಂದಿ ಮಹಿಳಾ ಮತದಾರರು ಸೇರಿದಂತೆ 14,715 ಮಂದಿ ಮತದಾರರಿದ್ದು, 18 ಮತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಕಾರ್ಯಕ್ಕೆ ಸಂಬಂಧಿಸಿದಂತೆ ಪಿಆರ್‍ಒ, ಎಪಿಆರ್‍ಒ ಹಾಗೂ ಪಿಒ ಸಹಿತ ಒಟ್ಟು 88 ಮಂದಿ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.