ಕಡಬ: ಚಿರತೆ ಮರಿಯೊಂದು ವಾಹನದಡಿಗೆ ಬಿದ್ದು ಸಾವನ್ನಪ್ಪಿದ ಧಾರುಣ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಬಳಿ ನಡೆದಿದೆ.
ಡಿ.27 ರಂದು ಬೆಳಗ್ಗೆ ಚಿರತೆ ಮರಿಯ ಮೃತ ದೇಹ ರಸ್ತೆಯಲ್ಲಿ ಪತ್ತೆಯಾಗಿದ್ದು, ಯಾವುದೋ ವಾಹನದಡಿಗೆ ಬಿದ್ದು ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಚಿರತೆಮರಿಯ ಮೃತದೇಹ ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.