ಪುತ್ತೂರು : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪುತ್ತೂರು ವಿಧಾನ ಸಭಾ ಕ್ಷೇತ್ರ ವತಿಯಿಂದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಮತ್ತು ಪ್ರತಿನಿಧಿಗಳ ಸಮ್ಮಿಲನ 2021 ಕಾರ್ಯಕ್ರಮವು ಫೆ.20 ರಂದು ಉಪ್ಪಿನಂಗಡಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬೆಡ್ರೋಡಿಯ ನೇತ್ರಾವತಿ ವಿಶ್ರಾಂತಿ ಧಾಮ ದಲ್ಲಿ ನಡೆಯಲಿದೆ.
ಬೃಹತ್ ವಾಹನ ಜಾಥಾ
ಕಾರ್ಯಕ್ರಮದ ಮೊದಲು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಬೃಹತ್ ವಾಹನ ಜಾಥಾ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಚಿವರಾದ ಶ್ರೀ ಯು. ಟಿ ಖಾದರ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ವಹಿಸಲಿದ್ದಾರೆ. ಇನ್ನುಳಿದಂತೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಸಭೆ ಯ ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಡಿ.ಸಿ.ಸಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಹರೀಶ್ ಕುಮಾರ್,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಮಾಜಿ ಶಾಸಕ ಮೊಯ್ದೀನ್ ಬಾವ,ಮಾಜಿ ಸಚಿವ ರಮಾನಾಥ ರೈ, ಮಾಜಿ ಸಚಿವ ಅಭಯಚಂದ್ರ ಜೈನ್,ಮಾಜಿ ಶಾಸಕ ವಸಂತ ಬಂಗೇರ, ಎ. ಐ.ಸಿ.ಸಿ ಕಾರ್ಯದರ್ಶಿ ಐವಾನ್ ಡಿಸೋಜ,ಮಂಗಳೂರು ಲೋಕಸಭಾ ಅಭ್ಯರ್ಥಿ ಮಿಥುನ್ ರೈ, ಕೆ.ಪಿ.ಸಿ.ಸಿ ಸದಸ್ಯ ರಘು ಬೆಳ್ಳಿಪ್ಪಾಡಿ, ಮಹಿಳಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಸಹಿತ ಹಲವಾರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಲ್ಲಾ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರುಳಿಧರ್ ರೈ ಮಠ0ತಬೆಟ್ಟು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.