ಉಡುಪಿ: ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಧಾರಾವಾಡ ಜಿಲ್ಲೆಯ ಕುಂದಗೋಳ್ ನಿವಾಸಿಯಾಗಿರುವ ಸರಸ್ವತಿ(16) ಎನ್ನಲಾಗಿದೆ.
ಧಾರಾವಾಡ ಮೂಲದ ವಿದ್ಯಾರ್ಥಿನಿ ತಂದೆ ತಾಯಿಯರೊಂದಿಗೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದರು.
ಸರಸ್ವತಿ ಉಡುಪಿ ಖಾಸಗಿ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದರು. ಇವರ ತಂದೆ – ತಾಯಿ ಕಟ್ಟಿಗೆ ಮಿಲ್ ನಲ್ಲಿ ಕೆಲಸ ಮಾಡಿಕೊಂಡಿದ್ದು, ನಿನ್ನೆ ತಂದೆ, ತಾಯಿ ಕೆಲಸಕ್ಕೆ ತೆರಳಿದ ವೇಳೆ ಸರಸ್ವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಬಗ್ಗೆ ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




























