ಉಪ್ಪಿನಂಗಡಿ: ಸಾರ್ವಜನಿಕ ‘ಮಸ್ಜಿದ್ ದರ್ಶನ್’ ಕಾರ್ಯಕ್ರಮವು ಜ.2 ರಂದು ಉಪ್ಪಿನಂಗಡಿಯ ಮಸ್ಜಿದುಲ್ ಹುದಾ ದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಗಳು ಹಾಗೂ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಆಗಮಿಸುತ್ತಿದ್ದಾರೆ ಎನ್ನುವ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಹಿಂದೂ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
‘ನಮ್ಮೂರ ಮಸೀದಿ ನೋಡ ಬನ್ನಿ..!!’ ಎಂಬ ಶೀರ್ಷಿಕೆಯಡಿಯಲ್ಲಿ ಉಪ್ಪಿನಂಗಡಿಯಲ್ಲಿ ಸಾರ್ವಜನಿಕ ‘ಮಸ್ಜಿದ್ ದರ್ಶನ್’ ಕಾರ್ಯಕ್ರಮ ನಡೆಯಲ್ಲಿದ್ದು, ಈ ಕಾರ್ಯಕ್ರಮಕ್ಕೆ ಶಾಸಕರು ಹಾಗೂ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಧಾನ ವ್ಯಕ್ತ ಪಡಿಸುತ್ತಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಬಂಟ್ವಾಳದಲ್ಲಿಯೂ ಇದೇ ರೀತಿಯ ಕಾರ್ಯಕ್ರಮವೊಂದು ನಡೆದಿದ್ದು, ಅದಕ್ಕೂ ಹಲವರು ವಿರೋಧ ವ್ಯಕ್ತ ಪಡಿಸಿದ್ದರು ಎನ್ನಲಾಗಿದೆ. ಧರ್ಮದ ನೆಲೆಯಲ್ಲಿ ಅನ್ಯಧರ್ಮಿಯರ ಕಾರ್ಯಕ್ರಮಗಳಿಗೆ ನಮ್ಮ ಧರ್ಮದ ಮುಖಂಡರು ತೆರಳುತ್ತಿರುವುದು ತಪ್ಪು ಎಂದು ಹಲವರು ಹೇಳುತ್ತಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಈ ವಿಷಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಹೆಸರು ಕೇಳದೆ ಹಾಕಿರಬಹುದು ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ..
ಕಳೆದ ಎರಡು ತಿಂಗಳಿಂದ ಉಪ್ಪಿನಂಗಡಿ ಬೂದಿ ಮುಚ್ಚಿದ ಕೆಂಡದಂತಿದ್ದು, ಆಗಾಗ್ಗೆ ಅಲ್ಲಲ್ಲಿ ಕಲಹಗಳು ನಡೆಯುತ್ತಿದ್ದು, ಇನ್ನೂ ಈ ವಿಷಯವಾಗಿ ಏನ್ನೆಲ್ಲಾ ಅವಘಡಗಳು ನಡೆಯಲಿದೆ ಎಂಬ ಭಯ ಸಾರ್ವಜನಿಕರಲ್ಲಿ ಮನೆಮಾಡಿದೆ..