ಉಪ್ಪಿನಂಗಡಿ: ‘ಮಸ್ಜಿದ್ ದರ್ಶನ್ ‘ ಎಂಬ ಕಾರ್ಯಕ್ರಮವೊಂದು ಮಸ್ಜಿದ್ ಹುದಾದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಾಸಕ ಸಂಜೀವ ಮಠಂದೂರು ಹಾಗೂ ಸುಬ್ರಹ್ಮಣ್ಯ ಮಠದ ಸ್ವಾಮೀಜಿಗಳು ಆಗಮಿಸುತ್ತಾರೆ ಎಂಬ ಆಹ್ವಾನ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಹಿಂದೂ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಬಗ್ಗೆ ಶಾಸಕರು ಮತ್ತು ಸ್ವಾಮೀಜಿಗಳು ಪ್ರತಿಕ್ರಿಯಿಸಿದ್ದಾರೆ..
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಂಜೀವ ಮಠಂದೂರು, ‘ಅನುಮತಿ ರಹಿತವಾಗಿ ಹೆಸರು ಹಾಕಿದ್ದಾರೆ, ಆಹ್ವಾನ ಪತ್ರಿಕೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕವೇ ನನ್ನ ಗಮನಕ್ಕೆ ಬಂದಿದೆ ಎಂದಿದ್ದಾರೆ’..
ಈ ಬಗ್ಗೆ ಸ್ಪಷ್ಟನೆ ನೀಡಿದ ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥಸ್ವಾಮೀಜಿಗಳು, ‘ಮಸ್ಜಿದ್ ಜರ್ಶನ” ಸಭಾ ಕಾರ್ಯಕ್ರಮಕ್ಕೆ ನಾವು ಬರುವುದಿಲ್ಲ ಎಂಬುದಾಗಿ ಆಯೋಜಕರು ಕರೆದಾಗ ಸ್ಪಷ್ಟವಾಗಿ ಹೇಳಿದ್ದೆವು. ಹಾಗಾಗಿ ಈ ವದಂತಿ ಸತ್ಯಕ್ಕೆ ದೂರವಾಗಿದೆ ಯಾರೂ ನಂಬಬಾರದು’ ಎಂದಿದ್ದಾರೆ.
ಈ ವಿಷಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಅಷ್ಟೇ ಅಲ್ಲದೆ ಇನ್ನೂ ಕೆಲವರ ಹೆಸರುಗಳನ್ನು ಅನುಮತಿ ಇಲ್ಲದೆ ಆಹ್ವಾನ ಪತ್ರಿಕೆಯಲ್ಲಿ ಹಾಕಲಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಈ ವಿಷಯದ ಮುಂದಿನ ಬೆಳವಣಿಗೆ ಯಾವ ರೀತಿಯಾಗಿರುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಯಾಗಿದೆ..